ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನೋರ್ವನ ಬಂಧನವಾಗಿದೆ.
ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಇತ್ತೀಚಿಗೆ ದೇಶದ್ರೋಹ ಆರೋಪದಡಿ ನೌಕಾನೆಲೆಯ ಗುತ್ತಿಗೆ ಆಧಾರದ ನೌಕರರಾದ ಮೂವರನ್ನು ವಶಕ್ಕೆ ಪಡೆದಿದ್ದರು. ಇದರ ಬೆನ್ನಲ್ಲೇ, ಅಧಿಕಾರಿಗಳು ಬೆಂಗಳೂರಿನಿಂದ ಸೌದಿಗೆ ಎಸ್ಕೇಪ್ ಆಗುತ್ತಿದ್ದ ಶಂಕಿತ ಉಗ್ರ ಅಜೀಜ್ ಅಹ್ಮದ್ನನ್ನು ಶುಕ್ರವಾರ ಬಂಧಿಸಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಶಂಕಿತ ಉಗ್ರನನ್ನು ಬಂಧಿಸಿದ್ದು, ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರ. ಹಿಜ್ಬ್ ಉಲ್ ತಹ್ರೀರ್ ಭಯೋತ್ಪಾದಕ ಸಂಘಟನೆಯ ಅಜೀಜ್ ಅಹ್ಮದ್ ನಿನ್ನೆ ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪಾರಾರಿಯಾಗುತ್ತಿದ್ದನು. ಈ ಮಾಹಿತಿಯನ್ನು ಇಮಿಗ್ರೇಷನ್ ಅಧಿಕಾರಿಗಳು ಎನ್ಐಎಗೆ ನೀಡಿದ್ದಾರೆ. ಮಾಹಿತಿ ಆಧರಿಸಿ ಕೂಡಲೆ ಸ್ಥಳಕ್ಕೆ ತೆರಳಿದ ಅಧಿಕಾರಿಗಳು ಶಂಕಿತನನ್ನು ಬಂಧಿಸಿದ್ದಾರೆ.
ನಾಕಾನೆಲೆಯ ಮೂವರು ವಶಕ್ಕೆ
ಇತ್ತೀಚಿಗೆ ಎನ್ಐಎ ಅಧಿಕಾರಿಗಳು ನೌಕಾನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ ಮೂವರನ್ನು ವಶಕ್ಕೆ ಪಡೆದಿದ್ದರು. ಈ ಆರೋಪಿಗಳು ಹನಿಟ್ರ್ಯಾಪ್ ಗೆ ಬಿದ್ದು, ಹಣಕ್ಕಾಗಿ ಸೀಬರ್ಡ್ ನೌಕಾನೆಲೆ ಫೋಟೋ, ಇತರೆ ಮಾಹಿತಿಯನ್ನು ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ನೀಡಿದ್ದರು. ಈ ಮಾಹಿತಿ ಆಧಾರದ ಮೇಲೆ ಎನ್ಐಎ ಅಧಿಕಾರಿಗಳು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾಗ ಹಲವಾರು ಅಂಶಗಳು ಹೊರಬಂದಿದ್ದವು.

