ಉಡುಪಿ : ಜಿಲ್ಲೆಯ ಒಟ್ಟು 4 ದ್ವೀಪಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರ ಸುರಕ್ಷತಾ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿರುವುದರಿಂದ ಉಡುಪಿ ಆಸುಪಾಸಿನ ಕಡಲ ತೀರದಲ್ಲಿರುವ ನಾಲ್ಕು ದ್ವೀಪಗಳಿಗೆ ಯಾವುದೇ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಸೈಂಟ್ ಮೇರಿಸ್ ದ್ವೀಪಕ್ಕೆ ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಯಾವುದೆಲ್ಲಾ ಪ್ರದೇಶಗಳಿಗೆ ಅನುಮತಿ ಇಲ್ಲ? ಇಲ್ಲಿದೆ ವಿವರ
ಉಡುಪಿಯ ಬಾದರಗಢ ದ್ವೀಪ, ಮಿಡಲ್ ದ್ವೀಪ (ಕೋಟೆ), ಮಾಲ್ತೀಗುಡ್ಡ ದ್ವೀಪ ಹಾಗೂ ಮಟ್ಟುಪಾರ್ ದ್ವೀಪ ಎಂಬ ನಾಲ್ಕು ದ್ವೀಪಕ್ಕೆ ಯಾವುದೇ ಸಾರ್ವಜನಿಕರು ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ.
ಇದಕ್ಕೆ ಸಾರ್ವಜನಿಕರ ವಲಯದಲ್ಲಿ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ

