ರಾಯಚೂರು : ಸ್ಕೂಲ್ ಬಸ್ ಮತ್ತು ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಶಾಲಾ ಮಕ್ಕಳು ಮೃತಪಟ್ಟಿದ್ದಾರೆ.
ಒಂದನೇ ತರಗತಿ ಸಮರ್ಥ, ಏಳನೇ ತರಗತಿ ಶ್ರೀಕಾಂತ್ ಮೃತರು.
ಒಟ್ಟು 32 ಮಕ್ಕಳು ಶಾಲಾ ವಾಹನದಲ್ಲಿ ಪ್ರಯಾಣಿಸುತ್ತಿದ್ದು, ಇಬ್ಬರು ಮೃತಪಟ್ಟಿದ್ದು, 18 ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

