ಉಡುಪಿ : ಚೌತಿ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕೋರಿಕೆಯಂತೆ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಜು.7 ರಂದು ಗಣೇಶ ವಿಗ್ರಹ ವಿಸರ್ಜನೆ ನಡೆಯಲಿರುವುದರಿಂದ ಹಾಗೂ ಸೆ.9 ಮತ್ತು ಸೆ.11ರಂದು ಅತೀ ಸೂಕ್ಷ್ಮ ಗಣಪತಿ ವಿಸರ್ಜನೆ ಇರುವ ಕಾರಣ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12ರವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಕರಾವಳಿಯಾದ್ಯಂತ ಗಣೇಶ ಚತುರ್ಥಿ ಸಂಭ್ರಮಕ್ಕೆ ಸರ್ವ ಸಿದ್ಧತೆ ಭರದಿಂದ ನಡೆದಿದ್ದು, ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಹಾಗೂ ಕೊಡಗು ಜಿಲ್ಲೆಯಾದ್ಯಂತ ತಯಾರಿ ನಡೆಯುತ್ತಿದ್ದು, ವ್ಯಾಪಾರ ಚಟುವಟಿಕೆ ಕೂಡ ಬಿರುಸುಗೊಂಡಿದೆ.
ಹಬ್ಬದ ಹಿನ್ನಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಾಗಿ ಉಡುಪಿ ಜಿಲ್ಲೆ ಹಾಗೂ ಉಡುಪಿ ನಗರ ವ್ಯಾಪ್ತಿಯಲ್ಲಿ ಜು.7, 9, 11 ರಂದು ಡ್ರೈ ಡೇ ಎಂದು ಘೋಷಿಸಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

