ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದಲ್ಲಿ ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವ ಮೂಲಕ ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.
ಕಳೆದ ಮೂರು ವರ್ಷಗಳಿಂದ ಮಸೀದಿಯ ಆವರಣದಲ್ಲಿ ಹಿಂದೂ ಮುಸ್ಲಿಂ ಸಮುದಾಯದವರಿಂದ ಗಣೇಶ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.
ಐದು ದಿನಗಳ ಕಾಲ ಗಣೇಶ ಪ್ರತಿಷ್ಠಾಪಿಸಿ ಪೂಜಾ ಕೈಂಕರ್ಯಗಳನ್ನ ನಡೆಸಲಾಗುತ್ತದೆ, ನಾಲ್ಕನೇ ದಿನ ಅನ್ನಸಂತರ್ಪಣೆ ಸೇರಿ ವಿವಿಧ ಕಾರ್ಯಕ್ರಮಗಳೂ ಸಹ ಆಯೋಜನೆ ಮಾಡಲಾಗುತ್ತದೆ.

