ಉಡುಪಿ : ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ವ್ಯಕ್ತಿಯೊಬ್ಬರನ್ನು ಬಂಧಿಸಿರುವ ಘಟನೆ ಕಾರ್ಕಳದ ಸಾಣೂರು ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮಹಿಳೆಯ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ, ಭರತ್ ಎಂಬಾತನನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ಓರ್ವ ಸಂತ್ರಸ್ಥೆ ಮಹಿಳೆಯನ್ನು ರಕ್ಷಿಸಿದ್ದು, ಆಪಾದಿತರಾದ ಭರತ್ ಕುಮಾರ್, ಮನೆಯ ಮಾಲೀಕರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.

