ಬೆಂಗಳೂರು : ರಾಜ್ಯದಲ್ಲಿ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಸುಮಾರು 20 ಲಕ್ಷಕ್ಕೂ ಹೆಚ್ಚು ಕಾರ್ಡ್ಗಳನ್ನು ರದ್ದುಪಡಿಸಲು ಆಹಾರ ಇಲಾಖೆ ಚಿಂತನೆ ನಡೆಸಿದೆ. ಈ ಕುರಿತು ಸರ್ವೆ ನಡೆಸಲು ಖಾಸಗಿ ಕಂಪನಿಯೊಂದಕ್ಕೆ ಇಲಾಖೆ ಜವಾಬ್ದಾರಿ ವಹಿಸಿದೆ ಎನ್ನಲಾಗಿದೆ.
ಪ್ರಸ್ತುತ ರಾಜ್ಯದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್ ಎಫ್ಎಸ್ಎ) ನಿಯಮಕ್ಕಿಂತ 14 ಲಕ್ಷ ಹೆಚ್ಚುವರಿ ಕಾರ್ಡ್ಗಳು ಇವೆ. ಇವುಗಳನ್ನು ಮಾತ್ರ ರದ್ದು ಪಡಿಸಬೇಕೆಂಬ ಚರ್ಚೆ ಹಿಂದಿನಿಂದಲೂ ನಡೆಯುತ್ತಿತ್ತು. ಆದರೆ, ಈಗ 20 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಗಳನ್ನು ಪತ್ತೆ ಮಾಡಿ ರದ್ದುಪಡಿಸಬೇಕು. ಈ ಮೂಲಕ ಅನ್ನಭಾಗ್ಯ ಯೋಜನೆಯಡಿ ಅನಗತ್ಯವಾಗಿ ಖರ್ಚಾಗುತ್ತಿರುವ ಹಣವನ್ನು ಉಳಿಸಬೇಕೆಂದು ಚಿಂತನೆ ನಡೆಸಿರುವ ಆಹಾರ ಸಚಿವ ಕೆ.ಎಚ್.ಮುನಿಯಪ ಅವರು, ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್ ಎಫ್ಎಸ್ಎ) ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಶೇ.76.04. ನಗರ ಪ್ರದೇಶದಲ್ಲಿ ಶೇ.49.36 ಸೇರಿ ಒಟ್ಟು 3,58,87,666 ಫಲಾನುಭವಿಗಳಿಗೆ 1.03 ಕೋಟಿ ಬಿಪಿಎಲ್ ಕಾರ್ಡ್ ನೀಡಬೇಕೆಂಬ ನಿಯಮವಿದೆ. ಆದರೆ, ಸದ್ಯ ರಾಜ್ಯದಲ್ಲಿ 3,93,29,981 ಫಲಾನುಭವಿಗಳಿಗೆ 1.16 ಕೋಟಿಗೂ ಹೆಚ್ಚು ಬಿಪಿಎಲ್ ಕಾರ್ಡ್ ವಿತರಿಸಲಾಗಿದೆ.
ಆಹಾರ ಭದ್ರತಾ ಕಾಯ್ದೆಯ ಪ್ರಕಾರ ರಾಜ್ಯದಲ್ಲಿ 1.03 ಕೋಟಿ ಬಿಪಿಎಲ್ ಕಾರ್ಡ್ಗಳು ಇರಬೇಕು ಆದರೆ ಸದ್ಯ ಕರ್ನಾಟಕದಲ್ಲಿ 1.16 ಕೋಟಿಗೂ ಹೆಚ್ಚು ಬಿಪಿಎಲ್ ಕಾರ್ಡ್ಗಳ ವಿತರಣೆಯಾಗಿದೆ. ಸುಮಾರು 14 ಲಕ್ಷ ಹೆಚ್ಚುವರಿ ಕಾರ್ಡ್ಗಳಿದ್ದು, ಅವನ್ನು ರದ್ದು ಮಾಡುವ ಬಗ್ಗೆ ಚರ್ಚೆ ನಡೆಯುತ್ತಿತ್ತು . ಆದರೆ ಈಗ 20 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ಅನ್ನಭಾಗ್ಯ ಯೋಜನೆಯಡಿ ಅನಗತ್ಯವಾಗಿ ಖರ್ಚಾಗುತ್ತಿರುವ ಹಣ ಉಳಿಸಲು ಸರ್ಕಾರದ ಚಿಂತನೆ ನಡೆಸಿದೆ.

