ಹಾಸನ : ವಾಟರ್ಮ್ಯಾನ್ಗೆ ಚಾಕು ಇರಿದು ರೌಡಿಶೀಟರ್ ಹತ್ಯೆ ಮಾಡಿರುವ ಘಟನೆ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚೀಕನಹಳ್ಳಿ ಗ್ರಾಮ ಪಂಚಾಯತಿಯ ವಾಟರ್ಮ್ಯಾನ್ ಗಣೇಶ್ (27) ಹತ್ಯೆಯಾಗಿರುವ ವಾಟರ್ಮ್ಯಾನ್.
ರೌಡಿಶೀಟರ್ ಮಧು ಕ್ಷುಲ್ಲಕ ಕಾರಣಕ್ಕೆ ವಾಟರ್ಮ್ಯಾನ್ ಜೊತೆ ಜಗಳ ತೆಗೆದಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿದಾಗ ಚಾಕುವಿನಿಂದ ವಾಟರ್ಮ್ಯಾನ್ಗೆ ಇರಿದಿದ್ದಾನೆ. ಇದರಿಂದ ವಾಟರ್ಮ್ಯಾನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಗೌರಿ-ಗಣೇಶ ಹಬ್ಬಕ್ಕೆ ಗ್ರಾಮಕ್ಕೆ ಬಂದಿದ್ದ ರೌಡಿಶೀಟರ್ ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾನೆ. ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

