ಉಡುಪಿ : ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರದ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಕಠಿನ ಕ್ರಮಕ್ಕೆ ಮುಂದಾಗಿದೆ.
ಕರ್ತವ್ಯ ಲೋಪ ಆರೋಪದಲ್ಲಿ ಒಂದು ವರ್ಷದಲ್ಲಿ 4 ಮಂದಿ ಎಸ್ಐಗಳು ಸಹಿತ 80ಕ್ಕೂ ಅಧಿಕ ಸಿಬ್ಬಂದಿ ಅಮಾನತುಗೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿ 1 ವರ್ಷ ಪೂರೈಸಿರುವ ಡಾ. ಅರುಣ್ ಕೆ. ಅವರು ಪೊಲೀಸರ ಕರ್ತವ್ಯದ ಬಗ್ಗೆ ಗಮನಹರಿಸುತ್ತಿದ್ದು, ಒಂದು ವರ್ಷದಿಂದಲೂ ವಿವಿಧ ಕಾರಣಗಳಿಂದ ಕರ್ತವ್ಯಲೋಪ ಮಾಡಿದವರಿಗೆ ಅಮಾನತು, ವರ್ಗಾವಣೆ ಶಿಕ್ಷೆ ನೀಡಲಾಗಿದೆ.
ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ 4 ಮಂದಿ ಎಸ್ಐಗಳ ಪೈಕಿ ಕೆಲವರ ಅಮಾನತು ಆದೇಶ ಮುಗಿದಿದ್ದು, ಹಿಂದೆ ಸೇವೆ ಸಲ್ಲಿಸುತ್ತಿದ್ದ ಠಾಣೆ ಬಿಟ್ಟು ಬೇರೆ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.

