ಕುಂದಾಪುರ : ಕೋಟೇಶ್ವರ ದೇವಸ್ಥಾನದ ಕೆರೆಗೆ ಹಾರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಹಂಗಳೂರಿನ ಗೌರೀಶ್ ಬಿ.ಆರ್. (25) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಎಂಬಿಬಿಎಸ್ ಮುಗಿಸಿದ್ದ ಗೌರೀಶ್ ಎಂಎಸ್ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಈಜುಕೊಳದಲ್ಲಿ ಈಜಲು ಹೋಗುವುದಾಗಿ ಮನೆಯಿಂದ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಕೋಟೇಶ್ವರ ದೇವಸ್ಥಾನದ ಕೆರೆ ಸಮೀಪ ಬ್ಯಾಗ್, ಮೊಬೈಲ್ ಫೋನ್, ಚಪ್ಪಲಿ ಕಂಡುಬಂದಿತ್ತು. ಕೆರೆಯಲ್ಲಿ ಹುಡುಕಿದಾಗ ಮೃತದೇಹ ಪತ್ತೆಯಾಗಿದೆ.
ಸಹೋದರ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

