ಬೆಂಗಳೂರು : ಕರ್ನಾಟಕದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

