ಉಡುಪಿ : ವಕೀಲರ ಸಂಘದ ನಿಯೋಗವು ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಗಿ ಡಿ.3 ರಂದು ವಕೀಲರ ಸಂಘವು ಆಯೋಜಿಸಲಿರುವ ವಕೀಲರ ದಿನಾಚರಣೆ ಕಾರ್ಯಕ್ರಮ ವನ್ನು ಉದ್ಘಾಟಿಸುವಂತೆ ಆಹ್ವಾನಿಸಿದರು.
ನಿಯೋಗದಲ್ಲಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಪದಾಧಿಕಾರಿಗಳಾದ ಆರೂರ್ ಸುಕೇಶ್ ಶೆಟ್ಟಿ, ರವೀಂದ್ರ ಬೈಲೂರ್, ಸಂತೋಷ್ ಕುಮಾರ್ ಮೂಡುಬೆಳ್ಳೆ, ಪ್ರಜ್ವಲ್ ಶೆಟ್ಟಿ ಹಾಗೂ ನ್ಯಾಯವಾದಿ ಶಶಿರಾಜ್ ಕೋಟ್ಯಾನ್ ಉಪಸ್ಥಿತರಿದ್ದರು.

