ಉಡುಪಿ : ಸಂತೆಕಟ್ಟೆ ಓವರ್ಪಾಸ್ ಕಾಮಗಾರಿಯಿಂದ ಹೆದ್ದಾರಿ ಸಂಪೂರ್ಣ ಹಾಳಾಗಿದ್ದು, ಸರ್ವೀಸ್ ರಸ್ತೆಯೂ ಸಂಚಾರ ದಟ್ಟಣೆಯಿಂದ ಕೂಡಿದ್ದು ನಿತ್ಯವೂ ಪ್ರಯಾಣಿಕರು ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಥಳಕ್ಕೆ ಭೇಟಿ ನೀಡಿದ ಅವರು ಓವರ್ಪಾಸ್ ಕಾಮಗಾರಿಯನ್ನು ತ್ವರಿತವಾಗಿ ನಡೆಸಲು ಸೂಚನೆ ನೀಡಿದರು.
ಕಾರ್ಮಿಕರ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆಗಳನ್ನು ಸರಿಪಡಿಸಿ ಕೊಡುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದರು.

