ಉಡುಪಿ/ಮಂಗಳೂರು : ಸೇವಾ ಭಡ್ತಿ, ಮೂಲ ಸೌಕರ್ಯ ಒದಗಿಸುವುದು ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉಡುಪಿ ಮತ್ತು ದ. ಕ. ಜಿಲ್ಲೆಗಳ ಗ್ರಾಮ ಆಡಳಿತಾಧಿಕಾರಿಗಳು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ, ತಮ್ಮ ಬೇಡಿಕೆಗಳನ್ನು ಸರಕಾರಕ್ಕೆ ಸಲ್ಲಿಸಿದರು.
ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರದಿಂದ ಗ್ರಾಮ ಪಂಚಾಯತ್ಗಳು ಹಾಗೂ ತಾಲೂಕು ಕಚೇರಿಯಲ್ಲಿ ಕಂದಾಯಕ್ಕೆ ಸಂಬಂಧಿಸಿದ ಸಾರ್ವಜನಿಕ ಸೇವೆಗೆ ಸ್ವಲ್ಪ ಸಮಸ್ಯೆಯಾಗಿದೆ.
ರಾಜ್ಯಾದ್ಯಂತ ನಡೆಯುತ್ತಿರುವ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಜಿಲ್ಲೆಯ ಗ್ರಾಮ ಆಡಳಿತಾಧಿಕಾರಿಗಳು ಬೆಂಬಲ ಸೂಚಿಸಿದ್ದಾರೆ.
ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಮತ್ತೊಮ್ಮೆ ರಾಜ್ಯ ಸರಕಾರಕ್ಕೆ ಸಲ್ಲಿಸಲಿದ್ದಾರೆ.

