ಮಂಗಳೂರು : ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾದ ಕಾರಣದಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ.
ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ , ಸಹಕಾರಿ ಕ್ಷೇತ್ರದ ಧುರೀಣ ಬೈಂದೂರಿನ ರಾಜು ಪೂಜಾರಿ ರವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಎಐಸಿಸಿ ಘೋಷಿಸಿದೆ.
ನಿನ್ನೆಯಷ್ಟೇ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿತ್ತು.

