ಉಡುಪಿ : ಕಲುಷಿತ ನೀರು ಸೇವಿಸಿ ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥವಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.
ಉಪ್ಪಂದ ಗ್ರಾಮ ಪಂಚಾಯತ್ ವ್ಯಾಪ್ತಿಯ 6ನೇ ಮತ್ತು 7ನೇ ವಾರ್ಡ್ನಲ್ಲಿ ಕುಡಿಯುವ ನೀರು ಸಂಪೂರ್ಣವಾಗಿ ಕಲುಷಿತಗೊಂಡ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದಾರೆಂದು ಎಂದು ವರದಿಯಾಗಿದೆ.
ಕಲುಷಿತ ನೀರು ಸೇವಿಸಿದ ಹಿನ್ನೆಲೆ ಗ್ರಾಮದಲ್ಲಿ 500 ಹಾಗೂ ಮೆಡಿಕಲ್ ನಲ್ಲಿ 600ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದು, ವಾರ್ಡ್ನ ಪ್ರತಿ ಮನೆಯಲ್ಲಿ ಮೂರಕ್ಕೂ ಅಧಿಕ ಜನರಿಗೆ ವಾಂತಿ ಭೇದಿ ಆಗಿದೆ. 80 ವರ್ಷದ ವೃದ್ಧನ ಸ್ಥಿತಿ ಗಂಭೀರವಾಗಿದ್ದು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

