ಬೆಂಗಳೂರು : ಚಾಮರಾಜ ನಗರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳವಾರ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಚಾಮರಾಜ ನಗರ, ಮೈಸೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

