ಕುಂದಾಪುರ : ಅಕ್ರಮವಾಗಿ ಪಟಾಕಿ ದಾಸ್ತಾನಿಟ್ಟ ಮನೆಯೊಂದಕ್ಕೆ ದಾಳಿ ನಡೆಸಿದ ಬೈಂದೂರು ಪೊಲೀಸರು ಪಟಾಕಿ ವಶಪಡಿಸಿಕೊಂಡ ಘಟನೆ ಬೈಂದೂರು ತಾಲೂಕಿನ ಉಪ್ಪುಂದದ ಕಂಚಿಕಾನ್ ಎಂಬಲ್ಲಿ ನಡೆದಿದೆ.
ದತ್ತಾತ್ರೇಯ ಶೇಟ್ ಎಂಬಾತ ಪಟಾಕಿ ಅಕ್ರಮ ದಾಸ್ತಾನು ಮಾಡಿಟ್ಟುಕೊಂಡ ಆರೋಪಿ.
ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದ ದತ್ತಾತ್ರೇಯ ಶೇಟ್ ಪಟಾಕಿ ಅಕ್ರಮ ದಾಸ್ತಾನು ಇಟ್ಟಿರುವುದರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತಪಾಸಣೆ ನಡೆಸಿದಾಗ ವಿವಿಧ ಬಗೆಯ ಸುಡುಮದ್ದುಗಳು, ಜಿಲೆಟಿನ್ ಕಡ್ಡಿಗಳು, ಮೊದಲಾದ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಇಟ್ಟಿರುವುದು ಕಂಡು ಬಂದಿದೆ ಎನ್ನಲಾಗಿದೆ.
ಅಕ್ರಮ ದಾಸ್ತಾನಿರಿಸಲಾಗಿದ್ದ ಸುಮಾರು ನಾಲ್ಕು ಲಕ್ಷಕ್ಕೂ ಮಿಕ್ಕಿ ಮೌಲ್ಯದ ಪಟಾಕಿಗಳನ್ನು ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

