ಉಡುಪಿ : ವಿಧಾನಪರಿಷತ್ ಉಪ ಚುನಾವಣೆಗೆ ಸಂಬಂಧಿಸಿ ಅ.21ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಮತದಾನ ದಿನದಂದು ಮತಗಟ್ಟೆಗಳ 200 ಮೀ. ಒಳಗೆ ಚುನಾವಣೆ ಪ್ರಚಾರ ಮಾಡುವುದನ್ನು ಹಾಗೂ ಕಲ್ಲು, ಕ್ಷಾರ ಪದಾರ್ಥ, ಸ್ಫೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

