ಉಡುಪಿ : ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.
ನರ್ಮ್ ಬಸ್ ನಿಲ್ದಾಣದ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಅನಧಿಕೃತವಾಗಿ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟಿದ್ದರು.
ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಭೀಮನಗೌಡ ಎಂದು ತಿಳಿಸಿದ್ದಾನೆ.
ಮದ್ಯದ ಸ್ಯಾಚೆಟ್ಗಳನ್ನು ಖರೀದಿಸಿ ಸ್ವಂತ ಲಾಭಕೋಸ್ಕರ ಅನಧಿಕೃತವಾಗಿ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟಿರುವುದಾಗಿ ತಿಳಿಸಿದ್ದ. ಆತನಿಂದ ನಗದು, ಮದ್ಯದ ಸ್ಯಾಚೆಟ್ಗಳು, ನೀರಿನ ಬಾಟಲಿ ಹಾಗೂ ಗ್ಲಾಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

