ಉಡುಪಿ : ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳ ಕುರಿತು ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ. ಕೆ. ಹರಿಪ್ರಸಾದ್ ಅವರು ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು ಖಂಡಿಸಿದ್ದಾರೆ.
ಪೇಜಾವರ ಶ್ರೀಗಳು ರಾಮರಾಜ್ಯದ ಕನಸಿನೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ, ಆರೋಗ್ಯ, ಗೃಹ ನಿರ್ಮಾಣದ ಸೌಲಭ್ಯ ದೊರಕಿಸಿಕೊಡುವಲ್ಲಿ ಹಾಗೂ ಅನಾಥಾಶ್ರಮ, ವೃದ್ಧಾಶ್ರಮ ಮೊದಲಾದ ಯಾವುದಾದರೂ ಸಮಾಜ ಸೇವಾ ಸಂಸ್ಥೆಗಳಿಗೆ ಸಹಾಯಹಸ್ತ ನೀಡುವ ತನ್ನ ಯೋಜನೆಯನ್ನು ಸಾಕಾರಗೊಳಿಸುವಲ್ಲಿ ಶ್ರಮಿಸುತ್ತಿದ್ದಾರೆ.
ಸಾಮಾಜಿಕ ಕ್ಷೇತ್ರದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಯಾರ ಬಗ್ಗೆಯೂ ಮಾತನಾಡುವಾಗ ತಮ್ಮ ಸ್ಥಾನದ ಘನತೆಯನ್ನು ಅರಿತು ಮಾತನಾಡಬೇಕು ಎಂದು ಅವರು ಹೇಳಿದರು.

