ಉಡುಪಿ : ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ವಿಳಂಬ ಧೊರಣೆಯನ್ನು ಖಂಡಿಸಿ ಇಂದ್ರಾಳಿ ಸೇತುವೆ ಹೋರಾಟ ಸಮಿತಿ ವತಿಯಿಂದ ಮಂಗಳವಾರ ಕಾಮಗಾರಿ ಸ್ಥಳದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲಾಯಿತು.
ಇದರಲ್ಲಿ ವಿವಿಧ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಇಂದ್ರಾಳಿಯಲ್ಲಿರುವ ರೈಲ್ವೆ ಮೇಲ್ಸೇತುವೆಯನ್ನು ಚತುಷ್ಪಥಗೊಳಿಸದೇ ಕಾಮಗಾರಿಯನ್ನು ಬಹುತೇಕ ಸ್ಥಗಿತಗೊಳಿಸಿ ವರ್ಷಗಳೇ ಆಗಿವೆ. ರಸ್ತೆ ಅವ್ಯವಸ್ಥೆ ಯು ಹಲವು ಸಾವು ನೋವಿಗೂ ಕಾರಣವಾಗಿರುವುದರಿಂದ ಮತ್ತು ದಿನನಿತ್ಯ ವಾಹನ ದಟ್ಟಣೆಯಿಂದ ಜನರು ತೊಂದರೆ ಅನುಭವಿಸುವಂತಾಗಿದೆ, ಈ ಕಾರಣದಿಂದಾಗಿ ಪ್ರತಿಭಟನಕಾರರು ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಮೇಲ್ಸೇತುವೆ ಕಾಮಗಾರಿ ಮೂರು ತಿಂಗಳೊಳಗೆ ಪೂರ್ಣಗೊಳಿಸದಿದ್ದರೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ ಮತ್ತು ಪ್ರತಿಭಟನಕಾರರು ಕೆಲಕಾಲ ರಸ್ತೆ ತಡೆ ನಡೆಸಿ ಪ್ರತಿರೋಧವನ್ನು ವ್ಯಕ್ತಪಡಿಸಿದರು.
ಈ ಪ್ರತಿಭಟನ ಸಭೆಯಲ್ಲಿ ಅಮೃತ್ ಶೆಣೈ, ರಮೇಶ್ ಕಾಂಚನ್, ಡಾ.ಪಿ.ವಿ. ಭಂಡಾರಿ, ಜ್ಯೋತಿ ಹೆಬ್ಬಾರ್ ಮುಂತಾದವರು ಉಪಸ್ಥಿತರಿದ್ದರು.

