ಮೈಸೂರು : ಮುಡಾ ಸೈಟ್ ಹಗರಣದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಯವರಿಗೆ ಲೋಕಾಯುಕ್ತ ನೋಟಿಸ್ ನೀಡಿದ್ದು ವಿಚಾರಣೆಗೆ ಸಿಎಂ ಹಾಜರಾಗಿದ್ದಾರೆ. ಪ್ರಕರಣದಲ್ಲಿ ಮೊದಲ ಆರೋಪಿ ಆಗಿರುವ ಸಿದ್ದರಾಮಯ್ಯರವರು, ಬೆಳಗ್ಗೆ 10:30ರ ಹೊತ್ತಿಗೆ ಮೈಸೂರಿನ ಲೋಕಾಯುಕ್ತ ಕಚೇರಿಗೆ ಹಾಜರಾಗಿದ್ದಾರೆ. ಅವರ 40 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಹಗರಣವೊಂದರಲ್ಲಿ ಇದೇ ಮೊದಲ ಬಾರಿಗೆ ವಿಚಾರಣೆ ಎದುರಿಸುತ್ತಿದ್ದಾರೆ.
ಖಾಸಗಿ ಕಾರಿನಲ್ಲಿ ಮೈಸೂರಿನ ಲೋಕಯುಕ್ತ ಕಛೇರಿಗೆ ನಡೆದ ಸಿ.ಎಂ ಸಿದ್ದರಾಮಯ್ಯ.
ಲೋಕಾಯುಕ್ತ ಎಸ್ಪಿ ಉದೇಶ್ ನೇತೃತ್ವದ ತಂಡ ಸಿಎಂರನ್ನ ವಿಚಾರಣೆ ನಡೆಸುತ್ತಿದ್ದಾರೆ.
ಭ್ರಷ್ಟ ಸಿದ್ದರಾಮಯ್ಯನವರೇ, ರಾಜೀನಾಮೆ ಕೊಡುವುದು ಯಾವಾಗ?’ ಅಂತ ಬಿಜೆಪಿ ಕಿಡಿಕಾರಿದೆ. ಮತ್ತು ಗೋ ಬ್ಯಾಕ್ ಸಿ. ಎಂ ಎಂಬ ಘೋಷಣೆಗಳು ಕೇಳಿಬರುತ್ತಿವೆ. ಶಿವಮೊಗ್ಗದ ಸಂಸದ ಬಿ.ವೈ ರಾಘವೇಂದ್ರ ಸಿದ್ದರಾಮಯ್ಯ ಸಿ.ಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಆಗ್ರಹಿಸುತ್ತಿದ್ದಾರೆ.

