ಕೇರಳದ ದಕ್ಷಿಣ ಕರಾವಳಿ ಮತ್ತು ಶ್ರೀಲಂಕಾದಿಂದ ದೂರದಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಸೃಷ್ಟಿಯಾಗಿದೆ. ಹಾಗಾಗಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಮುನ್ಸೂಚನೆವ ಇದೆ. ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನವೆಂಬರ್ 9ರ ನಂತರ ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

