ಮಂಗಳೂರು : ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕೊಳಂಬೆ ಕೊಂಚಾರು ಬದ್ರಿಯಾನಗರದ ಪೈಜಲ್ ಕೊಂಚಾರ್ (40) ಮತ್ತು ಕೋಡಿಯ ಸುಹೈಬ್ ಅಕ್ತರ್ (24) ಎಂಬವರನ್ನು ಕಾವೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಆರೋಪಿಗಳಿಂದ ಕಾರು ಹಾಗೂ ಸ್ಕೂಟರ್ ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿಗಳ ಪೈಕಿ ಪೈಜಲ್ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ 1 ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿದೆ.
ಪೈಜಲ್ ವಿರುದ್ಧ ಒಟ್ಟು 12 ದನ ಕಳ್ಳತನ ಪ್ರಕರಣ ದಾಖಲಾಗಿದ್ದು, ಅದರಲ್ಲಿ ಬಜ್ಜೆ ಪೊಲೀಸ್ ಠಾಣೆಯಲ್ಲಿ 7 ಪ್ರಕರಣಗಳು, ಉಡುಪಿಯ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ಮತ್ತು ಶಿರಸಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

