ಮಂಗಳೂರು : ನಿಷೇಧಿತ ಮಾದಕ ವಸ್ತು ಸೇವನೆ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಎಕ್ಕೂರು ಬಸ್ ತಂಗುದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಪ್ರಸಾದ್ನನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕಸಬಾ ಬೆಂಗ್ರೆಯ ಫುಟ್ಬಾಲ್ ಮೈದಾನದ ಬಳಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಕಸಬಾ ಬೆಂಗ್ರೆಯ ಸಯ್ಯದ್ ಆಫ್ರಿದಿಯನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ.

