ಮಂಗಳೂರು : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಜೀಪನಡು ಎಂಬ ಗ್ರಾಮದ ಕಂಚಿನಡ್ಕಪದವು ಮಹಮ್ಮದ್ ಮುಸ್ತಾಫ(21), ಆತನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಮತ್ತು ಕೊಲೆ ಬೆದರಿಕೆ ಆರೋಪದಡಿ ಕಂಚಿನಡ್ಕ ನಿವಾಸಿಗಳಾದ ಮಹಮ್ಮದ್ ಸಪ್ವಾನ್( 25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಇಬ್ರಾಹಿಂ ಮತ್ತು ಶಾಕೀರ್ (18)ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನವೆಂಬರ್ 7 ರ ರಾತ್ರಿ 10 ಗಂಟೆಯ ಸುಮಾರಿಗೆ ಕಂಚಿನಡ್ಕಪದವು ನಿವಾಸಿಯಾದ ಯುವತಿಯೊರ್ವಳು, ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಕರೆದ ಕಾರಣ ಅಲ್ಲಿಗೆ ಹೋಗಿದ್ದ ಮಹಮ್ಮದ್ ಮುಸ್ತಾಫಾನನ್ನು ಅಲ್ಲಿದ್ದ ಆರು ಹಿಡಿದು ರಕ್ತ ಒಸರುವಂತೆ ಥಳಿಸಿದ್ದು ಮಾತ್ರವಲ್ಲದೆ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ ಮತ್ತು ಕೊಲೆ ಬೆದರಿಕೆಯನ್ನು ಹಾಕಿದ್ದಾರೆ.
ಮಹಮ್ಮದ್ ಮುಸ್ತಾಫ್ ನೀಡಿರುವ ದೂರಿನನ್ವಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

