ವಿಟ್ಲ : ಕಂಬಳಬೆಟ್ಟುವಿನ ಅರ್ಕೆಜಾಲು ಒಳ ರಸ್ತೆಯಿಂದ ಮುಖ್ಯ ರಸ್ತೆಗೆ ನುಗ್ಗಿದ ಬೈಕ್ ನ್ನು ತಪ್ಪಿಸಲು ಪ್ರಯತ್ನಿಸಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿಯಾಗಿ, ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿರುವ ಘಟನೆ ನಡೆದಿದೆ.
ಬೈಕ್ ಸವಾರ ಅರ್ಕೆಜಾಲು ನಿವಾಸಿಯಾದ ಯತೀಶ ಗಾಯಗೊಂಡಿದ್ದಾರೆ. ಬೈಕ್ ನ್ನು ತಪ್ಪಿಸಲು ಪ್ರಯತ್ನಿಸಿದ ಕಾರು ಚಾಲಕ ಬೊಳಂತಿಮೊಗರು ನಿವಾಸಿಯಾದ ಸನನ್ ಅಪಾಯದಿಂದ ಪಾರಾಗಿದ್ದಾರೆ.
ಬೈಕ್ ಚರಂಡಿಗೆ ಬಿದ್ದಿದೆ, ಮತ್ತು ಕಾರು ರಸ್ತೆಯ ಮತ್ತೊಂದು ಭಾಗದಲ್ಲಿ ನಿಲ್ಲಿಸಿರುವ ಬೈಕ್ ಗೆ ಢಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿದೆ.
ಗಾಯಗೊಂಡಿರುವ ಬೈಕ್ ಸವಾರನನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು ಚಾಲಕನನ್ನು ರಕ್ಷಿಸಲಾಗಿದೆ.

