ಬೆಂಗಳೂರು : ಬಂಗಾಳ ಕೊಲ್ಲಿ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮವಾಗಿ ರಾಜ್ಯದಲ್ಲಿ ಮೂರುದಿನಗಳ ಕಾಲ ಮಳೆಯಾಗುವ ಮುನ್ಸೂಚನೆವಿದೆ.
ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆವಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕರಾಗಿರುವ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.
ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ, ತಂಪಾದ ಮೇಲೈ ಗಾಳಿ ಬೀಸಲಿದೆ ಎಂದು ಹೇಳಿದ್ದಾರೆ. ಇದರಿಂದ ಚಳಿಯ ವಾತಾವರಣ ಹೆಚ್ಚಾಗುವ ಅನುಭವವಾಗಲಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕರಾಗಿರುವ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

