ದರ್ಶನ್ ವಿರುದ್ಧ ಸುಪ್ರೀಂ ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದೆ
ಕೊಲೆ ಪ್ರಕರಣದಲ್ಲಿ ಬಂಧಿಯಾಗಿ ಆರೋಗ್ಯ ಸಮಸ್ಯೆಯ ಕಾರಣವೊಡ್ಡಿ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ವಿರುದ್ಧ ಸುಪ್ರೀಂ ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಲಾಗುತ್ತಿದೆ.
ಮಧ್ಯಂತರ ಜಾಮೀನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದು, ಮೇಲ್ಮನವಿ ಸಲ್ಲಿಕೆಗೆ ಗೃಹ ಇಲಾಖೆಯು ಅನುಮತಿ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸಹಿತ ಹಲವು ಆರೋಪಿಗಳು ಕಳೆದ ಹಲವು ತಿಂಗಳುಗಳಿಂದ ಜೈಲಿನಲ್ಲಿದ್ದರು, ಆದರೆ ಬೆನ್ನು ನೋವಿನ ಕಾರಣ ಹೇಳಿ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು, ಈಗ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗುತ್ತಿದೆ.

