ಉಡುಪಿ : ಹಿಂದುಳಿದ ವರ್ಗ ಕಲ್ಯಾಣ ಇಲಾಖೆಯಿಂದ, ಪ್ರಸ್ತುತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಪಿ.ಹೆಚ್.ಡಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3 ಬಿ ಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ಲೈನ್ ಮುಖಾಂತರವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 5 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in/ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದು, ಎಂದು ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

