ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಆರ್ಟಿಕಲ್ 370 ಮತ್ತು 35-ಎ ಮರುಸ್ಥಾಪನೆಗೆ ಸಂಬಂಧಿಸಿದಂತೆ ನಿರ್ಣಯವನ್ನು ಅಂಗೀಕರಿಸಲಾಯಿತು. ಇದರ ಬೆನ್ನಲ್ಲೇ ಸಾಮಾಜಿಕ ತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಇದರಲ್ಲಿ ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳನ್ನು ಕೂಗುತ್ತಿದ್ದ ವ್ಯಕ್ತಿಯನ್ನು ಕೆಲವರು ಎತ್ತಿಕೊಂಡು ಹೊರಗೆ ಕರೆದೊಯ್ಯುವುದನ್ನು ಕಾಣಬಹುದು.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಕ್ಕಾಗಿ ಬಿಜೆಪಿ ಶಾಸಕರನ್ನು ಹೊರಹಾಕಲಾಯಿತು ಎಂಬ ಶಿರ್ಷಿಕೆಯೊಂದಿಗೆ ಈ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.
ನವೆಂಬರ್ 8 ರಂದು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ 370 ನೇ ವಿಧಿಯನ್ನು ತೆಗೆದುಹಾಕುವ ವಿಷಯದ ಬಗ್ಗೆ ಕೋಲಾಹಲ ಉಂಟಾದ ಸಂದರ್ಭ, ಕುಪ್ವಾರದ ಪಿಡಿಪಿ ಶಾಸಕ ಆರ್ಟಿಕಲ್ 370 ರ ಮರುಸ್ಥಾಪನೆಯ ಬ್ಯಾನರ್ ಅನ್ನು ತೋರಿಸಿದ ನಂತರ ಸದನದಲ್ಲಿ ಕೋಲಾಹಲ ಜೋರಾಯಿತು, ಇದನ್ನು ಅನುಸರಿಸಿ ಬಿಜೆಪಿ ಶಾಸಕರು ‘ಭಾರತ್ ಮಾತಾ ಕಿ ಜೈ’ ಘೋಷಣೆಗಳನ್ನು ಕೋಗಿದರು. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರ ಆದೇಶದ ಮೇರೆಗೆ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಅಧಿವೇಶನದ 5 ನೇ ದಿನವಾದ ನವೆಂಬರ್ 8 ರಂದು ಸದನದ ಬಾವಿಗೆ ಪ್ರವೇಶಿಸಿದ ಬಿಜೆಪಿ ಶಾಸಕರನ್ನು ಮಾರ್ಷಲ್ಗಳು ಹೊರಹಾಕಿದರು ಎಂಬ ಮಾಹಿತಿ ಇದೆ.
ಹಾಗಾಗಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಿಂದ ಬಿಜೆಪಿ ಶಾಸಕರನ್ನು ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗಿದ್ದಕ್ಕಾಗಿ ಹೊರಹಾಕಲಾಗಿಲ್ಲ ಎಂದು ಸ್ಪಷ್ಟನೆ ದೊರಕಿದೆ.

