ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಭೆ ಜರುಗಿತು.
ಈ ಸಭೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ, ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

