ಕುಂದಾಪುರ : ಕರ್ನಾಟಕ ರಾಜ್ಯ ಸರಕಾರ ನೌಕರ ಸಂಘದ ಕುಂದಾಪುರ ತಾಲೂಕು ಶಾಖೆ ಅಧ್ಯಕ್ಷರಾಗಿ ಡಾ.ನಾಗೇಶ್ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಸರಕಾರ ನೌಕರ ಸಂಘದ ಕುಂದಾಪುರ ತಾಲೂಕು ಶಾಖೆಯಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಆರೋಗ್ಯ ಇಲಾಖೆಯಿಂದ ಪ್ರತಿನಿಧಿಸಿ, ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಕಂದಾಯ ಇಲಾಖೆ ಕಾಂತರಾಜು, ರಾಜ್ಯ ಪರಿಷತ್ ಸದಸ್ಯರಾಗಿ ರಂಗನಾಥ್ ಎ. ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ.ನಾಗೇಶ್ ರವರು ಪ್ರಸ್ತುತ ಕುಂದಾಪುರ ಉಪವಿಭಾಗೀಯ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿದ್ದಾರೆ.

