ಉಡುಪಿ: ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಂಭವ ಇದೆ.
ಕರ್ನಾಟಕದ ಕರಾವಳಿ ತೀರದಲ್ಲಿ ಜೋರಾದ ಗಾಳಿಯು ಪ್ರತಿ ಗಂಟೆಗೆ 35ರಿಂದ 45.0 ಕಿ.ಮೀ ವೇಗದಲ್ಲಿ ಬೀಸುತ್ತಿದ್ದು, ಪ್ರತಿ ಗಂಟೆಗೆ 55 ಕಿ.ಮೀ ತಲುಪುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಮುದ್ರದ ಅಲೆಗಳು ಉಲ್ಭಣಗೊಳ್ಳಲಿವೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಇಂದು ಎಲ್ಲೆಲ್ಲಿ ಮಳೆ?
ನವೆಂಬರ್ 17ರಂದು (ಇಂದು) ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ / ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಉತ್ತರ ಕನ್ನಡ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

