ಮಂಗಳೂರು: ಗುರುಪುರ ಫಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರ ಮೇಲೆ ಗಣಿಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಐದು ದೋಣಿಗಳು, ಒಂದು ಮೋಟಾರ್ ಮತ್ತು ಒಂದು ಗ್ಯಾಸ್ ಸಿಲಿಂಡರ್ ಜಪ್ತಿ ಮಾಡಿದ್ದಾರೆ.
ಮಂಗಳೂರು ಎಸಿ ಹರ್ಷವರ್ಧನ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ತಹಶೀಲ್ದಾರ್ ಪ್ರಶಾಂತ ಪಾಟೀಲ, ಗಣಿ ಇಲಾಖೆ ಭೂ ವಿಜ್ಞಾನಿ ಗಿರೀಶ ಮತ್ತಿತರರು ತಂಡದಲ್ಲಿದ್ದರು.

