ಕಾರ್ಕಳ: ಹಿರಿಯ ಕಾಂಗ್ರೆಸ್ ಮುಖಂಡ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ರಾಜ್ಯ ಉಪಾಧ್ಯಕ್ಷ, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಡಿ.ಆರ್ ರಾಜು ಹೃದಯಾಘಾತದಿಂದ ನಿಧನರಾದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಸಂತಾಪ ಸೂಚಿಸಿದ್ದು, ಡಿ.ಆರ್ ರಾಜು ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ನಷ್ಟವಾಗಿದ್ದು, ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದರು.

