ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಸಾಧನೆಗೈದ ಐದರಿಂದ 18 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡೆ ಕಲೆ ಸಾಂಸ್ಕೃತಿಕ ತಾರ್ಕಿಕ ಸಾಧನೆಗೈತ 5 ರಿಂದ 18 ವರ್ಷದೊಳಗಿನ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಸೂಕ್ತ ದಾಖಲೆಗಳೊಂದಿಗೆ ಡಿಸೆಂಬರ್ 2 ರ ಒಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪ ನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಠಡಿ ಸಂಖ್ಯೆ 204 ಮೊದಲನೆಯ ಮಹಡಿ ರಜತಾದ್ರಿ ಮಣಿಪಾಲ
0820-2574978 ಸಂಪರ್ಕಿಸಬಹುದು.

