ತೆಕ್ಕಟ್ಟೆ : ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಎಚ್ ಮುನಿಯಪ್ಪ ರವರು ಬಿಪಿಎಲ್ ಕಾರ್ಡ್ ಮತ್ತು ಎಪಿಎಲ್ ಕಾರ್ಡ್ ರದ್ದಾಗಲ್ಲ ಎಂದು ಹೇಳಿದ್ದಾರೆ.
ಹೆಗ್ಗುಂಜಿ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಜನ್ನಾಡಿ ಮತ್ತು ಮಣಿಗೇರಿ ಕೊರಗ ಕಾಲನಿಯಲ್ಲಿ ಸುಮಾರು ಎರಡು ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 14 ಉಚಿತ ಮನೆಗಳ ಗೃಹ ಪೂಜೆ ಮತ್ತು ಲೋಕಾರ್ಪಣೆಯ ಕಾರ್ಯಕ್ರಮದಲ್ಲಿ ನಿಜವಾದ ಬಿಪಿಎಲ್ ಕಾಡುದಾರರಿಗೆ ಯಾವುದೇ ತೊಂದರೆ ಇಲ್ಲ ಮತ್ತು ಬಿಪಿಎಲ್ ಕಾರ್ಡ್ ಪಡೆದಿರಲು ಅರ್ಹರಲ್ಲದವರಿಗೆ ಎಪಿಎಲ್ ಗೆ ವರ್ಗಾಯಿಸಲು ಐದು ಮಾರ್ಗಸೂಚಿ ಸರ್ಕಾರವು ಸೂಚಿಸಿದೆ.
ಇಲಾಖೆಯ ಸರ್ವರ್ ಸಮಸ್ಯೆ ಸಂಪೂರ್ಣವಾಗಿ ಸರಿ ಹೋಗಿದೆ, ಪರಿಷ್ಕರಣೆ ಪ್ರಕ್ರಿಯೆ ಪೂರ್ಣವಾದ ಬಳಿಕ ಹೊಸ ರೇಷನ್ ಕಾರ್ಡಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿರುತ್ತಾರೆ.

