ಉಡುಪಿ : ಹೈಕೋರ್ಟ್ ಜಡ್ಜ್ ರಾದ ಶ್ರೀ ವಿಶ್ವಜಿತ್ ಶೆಟ್ಟಿ ಅವರು ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ದೇವಾಲಯದ ವತಿಯಿಂದ ಪೂರ್ಣ ಕುಂಭದೊಂದಿಗೆ ಶ್ರೀ ವಿಶ್ವಜಿತ್ ಶೆಟ್ಟಿ ಅವರನ್ನು ಬರಮಾಡಿಕೊಳ್ಳಲಾಯಿತು. ನಾಡೋಜ ಡಾ. ಜಿ. ಶಂಕರ್ ರವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಶ್ರೀ ವಿಶ್ವಜಿತ್ ಶೆಟ್ಟಿ ಅವರನ್ನು ಗೌರವಿಸಿದರು.
ಕ್ಷೇತ್ರದ ಅಧ್ಯಕ್ಷರಾದ ಶ್ರೀ ಗಿರಿಧರ್ ಸುವರ್ಣ, ಶ್ರೀ ಮನೋಹರ್ ಶೆಟ್ಟಿ, ಸಂತೋಷ್ ಶೆಟ್ಟಿ ತೆಂಕರಗುತ್ತು, ಯೋಗೀಶ್ ಶೆಟ್ಟಿ ಕಾಪು, ಶೋಭಿತ್ ಶೆಟ್ಟಿ, ಉಮೇಶ್ ಶೆಟ್ಟಿ, ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳ್, ಪ್ರಧಾನ ಅರ್ಚಕರಾದ ಶ್ರೀ ರಾಘವೇಂದ್ರ ಉಪಾಧ್ಯಾಯ, ರಾಘವೇಂದ್ರ ಸುವರ್ಣ ಬೈಕಾಡಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

