ಕಡಬ : ಕಾಪಿನ ಬಾಗಿಲು ಎಂಬಲ್ಲಿ ವೃದ್ಧ ದಂಪತಿಗಳ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ದೌರ್ಜನ್ಯವನ್ನು ಖಂಡಿಸಿ ಇಂದು ತಹಸೀಲ್ದಾರರ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗಿದೆ.
ಸಾಮಾಜಿಕ ಹೋರಾಟಗಾರರಾದ ಮತ್ತು ನೀತಿ ತಂಡದ ರಾಜ್ಯಾಧ್ಯಕ್ಷ ಜಯಂತ್, ನ್ಯಾಯವಾದಿ ಬಿಎಮ್ ಭಟ್ ಕೆ, ಆರ್ ಎಸ್ ಪಕ್ಷದ ವೇಣುಗೋಪಾಲ್ ಅವರು ನೇತೃತ್ವ ವಹಿಸಿದ್ದು. ಸಮಾನ ಮನಸ್ಕರರು ಪ್ರತಿಭಟನೆಯಲ್ಲಿ ಕೈಜೋಡಿಸಿದ್ದಾರೆ.
ಪ್ರತಿಭಟನೆಯ ಸಂದರ್ಭ ಮನೆ ಕಳೆದುಕೊಂಡ ವೃದ್ಧ ದಂಪತಿಯು ನಮಗೆ ಜೀವ ಬೇಡವೆಂದು ಒದ್ದಾಡಿದ್ದು, ಅಧಿಕಾರಿಗಳು ಮೂಕ ಪ್ರೇಕ್ಷಕರಾಗಿ ನೋಡುತ್ತಿರುವುದು ಕಂಡು ಬಂದಿದೆ.
ಕಡಬ ಠಾಣಾ ಪೊಲೀಸರು ಬಂದೋ ಬಸ್ತ್ ಏರ್ಪಡಿಸಿದ್ದಾರೆ.

