ನಿಖಿಲ್ ಕುಮಾರಸ್ವಾಮಿ ಈ ಸಲದ ಬೈ ಎಲೆಕ್ಷನ್ ನಲ್ಲಿ ಗೆದ್ದೇ ಗೆಲ್ಲುತ್ತಾರೆ ಎಂಬ ಸಮೀಕ್ಷೆಗಳು ಸುಳ್ಳಾಗಿದೆ. ಮೂರನೇ ಬಾರಿ ನಿಖಿಲ್ ಕುಮಾರಸ್ವಾಮಿಯವರು ಸೋಲು ಅನುಭವಿಸಿದ್ದಾರೆ.
ಸ್ವತಃ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರು ನಿಖಿಲ್ ಅವರ ಪರ ಮತಯಾಚನೆ ಮಾಡಿದ್ದರೂ, ಗೆಲುವು ನಿಖಿಲ್ ಕುಮಾರಸ್ವಾಮಿ ಅವರ ಕೈ ಹಿಡಿಯಲಿಲ್ಲ.
ಕಾಂಗ್ರೆಸ್ ಅಭ್ಯರ್ಥಿಯಾದ ಯೋಗೀಶ್ವರ್ ಅವರು 25,513 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯಾದ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ( ಬಿಜೆಪಿ) 87,120 ಮತಗಳನ್ನು ಪಡೆದಿದ್ದರೆ, ಯೋಗೇಶ್ವರ್( ಕಾಂಗ್ರೆಸ್) 1,12,638 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

