ಬ್ರಹ್ಮಾವರ : ಹನೇಹಳ್ಳಿ ಗ್ರಾಮ, ಬಾರ್ಕೂರು ಸರಕಾರಿ ಆಸ್ಪತ್ರೆ ಬಳಿ ಕಾರು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆಯು ನ.24ರ ರಾತ್ರಿ ಸಂಭವಿಸಿದೆ.
ಮೃತ ಬೈಕ್ ಸವಾರ, ಹರೀಶ್ ಎಂದು ಗುರುತಿಸಲಾಗಿದೆ.
ಮಂದಾರ್ತಿಯಿಂದ ಬಾರ್ಕೂರು ಕಡೆಗೆ ಹೋಗುತ್ತಿದ್ದ ಕಾರು, ಮಂದಾರ್ತಿ ಕಡೆಗೆ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯ ಗೊಂಡಿದ್ದ.
ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ, ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ನ.25ರಂದು ಬೆಳಗಿವ ಜಾವಾ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

