ಉಡುಪಿಯಲ್ಲಿ ಇಂದು ಸಂವಿಧಾನ ದಿನಾಚರಣೆ ಮತ್ತು ಪೌರ ಕಾರ್ಮಿಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು
ಸಂವಿಧಾನ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಪುತ್ಥಳಿಗೆ ಕರ್ನಾಟಕ ಸರಕಾರದ ಮಾಜಿ ಸಚಿವರಾದ ಶ್ರೀ ಎನ್. ಮಹೇಶ್ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಮುಖಂಡರಾದ ಶ್ರೀ ಉದಯ ಕುಮಾರ್ ಶೆಟ್ಟಿ ಕಿದಿಯೂರು, ಶ್ರೀ ವಿಕಾಸ್ ಪುತ್ತೂರು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ದಿನಕರ ಬಾಬು, ಶ್ರೀ ದಿನೇಶ್ ಅಮೀನ್, ಶ್ರೀಮತಿ ಶ್ಯಾಮಲ ಕುಂದರ್, ಶ್ರೀಮತಿ ಶಿಲ್ಪಾ ಸುವರ್ಣ, ಶ್ರೀಮತಿ ರೇಷ್ಮಾ ಶೆಟ್ಟಿ, ಶ್ರೀ ವಿಜಯ ಕುಮಾರ್, ಶ್ರೀ ಗುರುರಾಜ್, ಶ್ರೀ ಕಿಶೋರ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ನಗರಸಭೆಯ ವತಿಯಿಂದ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ 2024 ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಉಡುಪಿ ನಗರದ ಸ್ವಚ್ಚತೆ ಹಾಗೂ ಅಭಿವೃದ್ಧಿಗೆ ಪೌರ ಕಾರ್ಮಿಕರ ಕೊಡುಗೆಯನ್ನು ಶ್ಲಾಘಿಸಿ ಅಭಿನಂದನೆ ಸಲ್ಲಿಸಿದರು.
ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ., ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸುಂದರ ಕಲ್ಮಾಡಿ, ನಗರ ಸಭೆ ಸದಸ್ಯರು ಉಪಸ್ಥಿತರಿದ್ದರು.

