ಕೊಲ್ಲೂರು: ಮೂಕಾಂಬಿಕೆಯ ದರ್ಶನ ಪಡೆಯಲು ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಸಾಮಾನ್ಯರು ಮಾತ್ರವಲ್ಲದೆ, ಸೆಲೆಬ್ರಿಟಿಗಳು ಕೂಡ ಇಲ್ಲಿಗೆ ಆಗಮಿಸಿ ದರ್ಶನ ಪಡೆಯುತ್ತಾರೆ. ಕಾಲಿವುಡ್ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ಇಲ್ಲಿಗೆ ಆಗಮಿಸಿದ್ದಾರೆ.
ಕಾಲಿವುಡ್ನಲ್ಲಿ ಸಾಕಷ್ಟು ಹೆಸರು ಮಾಡಿರೋ ಸೂರ್ಯ ಹಾಗೂ ಜ್ಯೋತಿಕಾ ಅವರು ಕೊಲ್ಲೂರಿಗೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಚಂಡಿಕಾಯಾಗದಲ್ಲಿ ಭಾಗಿಯಾಗಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.
ಕಾಲಿವುಡ್ ದಂಪತಿ ಆಗಮಿಸಿದ್ದು ವಿಶೇಷವಾಗಿತ್ತು. ಸೆಲೆಬ್ರಿಟಿ ದಂಪತಿಯನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ಸೂರ್ಯ ಹಾಗೂ ಜ್ಯೋತಿಕಾಗೆ ಕರ್ನಾಟಕದಲ್ಲೂ ದೊಡ್ಡ ಅಭಿಮಾನಿ ಬಳಗ ಇದೆ.

