ಉಡುಪಿ: ರಸ್ತೆ ದಾಟುತಿದ್ದ ವೇಳೆ ಪಿಕಪ್ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ನಡೆದಿದೆ.
ಬಡಗಬೆಟ್ಟು ಮಿಷನ್ ಆಸ್ಪತ್ರೆ ಬಳಿಯ ಜಂಕ್ಷನ್ನಲ್ಲಿ ಬಾಲರಾಜ್ (34) ರಸ್ತೆ ದಾಟುತ್ತಿದ್ದರು. ಈ ವೇಳೆ ಬಡಗುಬೆಟ್ಟು ಕಡೆಯಿಂದ ನಿತಿನ್ ಅವರು ಚಲಾಯಿಸಿಕೊಂಡು ಬಂದ ಪಿಕಪ್ ವಾಹನ ಅವರಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ರಸ್ತೆಗೆ ಬಿದ್ದು ಗಾಯಗೊಂಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

