ರಾಜ್ಯದಾದ್ಯಂತ ಕೆಲವು ಮಂದಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಿಪಿಎಲ್ ಕಾರ್ಡ್ಗಳನ್ನು ಹೊಂದಿದ್ದಾರೆ. ಅಂಥವರ ಬಿಪಿಎಲ್ ಕಾರ್ಡನ್ನು ಸರ್ಕಾರವು ರದ್ದು ಮಾಡಿ, ಅಂತಹವರಿಗೆ ಎಪಿಎಲ್ ಕಾರ್ಡ್ ನೀಡಲು ಮುಂದಾಗಿತ್ತು. ಆದರೆ, ಈ ಪ್ರಕ್ರಿಯೆಯಲ್ಲಿ ಅರ್ಹ ಫಲಾನುಭವಿಗಳ ಕಾರ್ಡ್ ಕೂಡ ರದ್ದಾಗಿದ್ದವು. ಹಾಗಾಗಿ, ಸರ್ಕಾರವು ಬಡವರ ಬಿಪಿಎಲ್ ಕಾರ್ಡ್ಗಳನ್ನು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ ಎಂದು ವಿರೋಧ ಕೇಳಿ ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರವು ಬಿಪಿಎಲ್ ಕಾರ್ಡ್ ಮರು ಪರಶೀಲನೆಗೆ ಮುಂದಾಗಿದೆ.
4,272 ಮಂದಿ ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿರುವ ಮಾಹಿತಿ ದೊರೆಕಿದ್ದು ಅಂಥವರ ವಿರುದ್ಧ ದಂಡಾಸ್ತ್ರ ಪ್ರಯೋಗಿಸಲು ಸರ್ಕಾರ ಮುಂದಾಗಿದೆ.
ಬಿಪಿಎಲ್ ಕಾರ್ಡ್ ಮರು ಪರಶೀಲನೆಗೆ ತೊಡಕಾಗಿದ್ದ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಲಾಗಿದೆ.
ರದ್ದಾಗಿರುವ ಎಲ್ಲಾ ಬಿಪಿಎಲ್ ಕಾರ್ಡ್ಗಳ ಮರು ಪರಶೀಲನೆಗೆ ಅಧಿಕಾರಿಗಳು ಮುಂದಾಗಿದ್ದಾರೆ.
ಬಿಪಿಎಲ್ ಕಾರ್ಡ್ ರದ್ದು ವಿಚಾರದಲ್ಲಿ ಬಡವರಿಗೆ ತೊಂದರೆಯಾಗಿದ್ದರೆ, ಅಂತಹವರನ್ನು ತಹಶೀಲ್ದಾರ್ ರ ಗಮನಕ್ಕೆ ತರಲು ಸೂಚಿಸಲಾಗಿದೆ.
ಇಂತಹ ಸಮಸ್ಯೆಯನ್ನು ಒಂದು ವಾರದೊಳಗೆ ಬಗೆಹರಿಸುವಂತೆ ಸರ್ಕಾರವು ಸೂಚನೆ ನೀಡಿದೆ.
ಸರ್ಕಾರಿ ನೌಕರಿ ಹೊಂದಿರುವವರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ ಯಾವುದೇ ಬಡ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣವೇ ಮಾಹಿತಿ ತಿಳಿಸಬೇಕು ಎಂದು ಸರ್ಕಾರ ಸೂಚಿಸಿದೆ.

