ಉಡುಪಿ : ಬನ್ನಂಜೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆಯನ್ನು ಮಾಡುತ್ತಿದ್ದ ಭೂಪನೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಇಕ್ಬಾಲ್ (33) ಎಂದು ಗುರುತಿಸಲಾಗಿದೆ.
ಮಾದಕ ದ್ರವ್ಯ ಸೇವನೆ ಮಾಡಿ ಅಮಲಿನಲ್ಲಿದ್ದ ಇಕ್ಬಾಲ್ ನನ್ನು ವಶಕ್ಕೆ ಪಡೆದ ಪೊಲೀಸರು, ಉಡುಪಿ ಜಿಲ್ಲಾಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಮಾದಕ ವಸ್ತುವನ್ನು ಸೇವಿಸಿರುವುದು ದೃಢಪಟ್ಟಿದೆ
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

