ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಭಾಗಗಳಲ್ಲಿ ಡಿಸೆಂಬರ್ 3 ರವರೆಗೆ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ. ಮತ್ತು ಗಂಟೆಗೆ 90 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ.
ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಸಮುದ್ರ ತೀರದ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಈ ಕಾರಣದಿಂದಾಗಿ ನಾಡದೋಣಿಗಳು ಸಮುದ್ರ ತೀರದಲ್ಲಿ ಲಂಗರು ಹಾಕಿವೆ.

