ಮಂಗಳೂರು : ಮಂಗಳೂರಿನ ಮಲ್ಲಿಕಟ್ಟೆ ಸಮೀಪ ಇರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಇಬ್ಬರು ನಾಯಕರು ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಪಂಚಾಯಿತಿಯ ಉಪಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಷಯವಾಗಿ ಪ್ರಾರಂಭವಾದ ಈ ಮಾತಿನ ಚಕಮಕಿಯು ನಂತರ ಹೊಡೆದಾಟಕ್ಕೆ ತಿರುಗಿಕೊಂಡಿದೆ.
ಮೊದಲಿಗೆ ಕಾಂಗ್ರೆಸ್ ಮುಖಂಡನಾದ ಪ್ರಕಾಶ್ ಶೆಟ್ಟಿ ತುಂಬೆ ಮತ್ತು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಹರೀಶ್ಕುಮಾರ್ ಹೊಡೆದಾಡಿಕೊಂಡಿದ್ದಾರೆ. ಈ ಸಂದರ್ಭ ಉಭಯ ನಾಯಕರ ಕಾರ್ಯಕರ್ತರು ಜಮಾಯಿಸಿದ್ದಾರೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸರ ನಿಯೋಜನೆಯನ್ನು ಮಾಡಲಾಗಿರುತ್ತದೆ.

